ಸುದ್ದಿಯೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ದೂದ್ ಪೇಡಾ ದಿಗಂತ್ ಪತ್ನಿ ನಟಿ ಐಂದ್ರಿತಾ ರೇ

ಬರೋಬ್ಬರಿ ಎಂಟು ವರ್ಷಗಳ ನಂತರ ದಿಗಂತ್ ಹಾಗೂ ಐಂದ್ರಿತಾ ರೇ ಜೋಡಿಯಾಗಿ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 2012ರಲ್ಲಿ ಬಂದಂತಹ ಪಾರಿಜಾತ ಈ ಜೋಡಿ ಒಟ್ಟಾಗಿ ನಟಿಸಿದ್ದ ಸಿನಿಮಾ ಆಗಿತ್ತು. ಅದಾದನಂತರ ಇವರು ಯಾವುದೇ ಸಿನಿಮಾಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಹೊಸ ಸಿನಿಮಾ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಮೂಲಕ ಈ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ ಸಂತೋಷದ ವಿಚಾರವನ್ನು ಕುರಿತಾಗಿ ನಟಿ ಐಂದ್ರಿತಾ ರೇ ಅವರು ಟ್ವೀಟ್ ಒಂದನ್ನು ಮಾಡಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Post a Comment

0 Comments