ಪ್ರಧಾನಿ ಮೋದಿ ಭೇಟಿಯಾಗಲು ನಿರ್ಧರಿಸಿದ ಎಚ್ಡಿಕೆ

ಈ ಕಾರ್ಯವನ್ನು ಜೆಡಿಎಸ್ ಯಾವಾಗಲೂ ಬೆಂಬಲಿಸುತ್ತದೆ ಎಂದು ಅವರು ಹೇಳಿದ್ದಾರೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಅವರು ಒತ್ತಾಯಿಸಿದ್ದಾರೆ.  ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‍ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Post a Comment

0 Comments